ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಬೇಗ ರೆಸ್ಯೂಮ್ ಕಳುಹಿಸಿ. ಬೆಂಗಳೂರಿನಲ್ಲಿ ಕೆಲಸ ಹುಡುಕ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್, ಅನಸ್ತೇಸಿಯಾ ಟೆಕ್ನಾಲಜಿ, ಬಯೋಟೆಕ್ನಾಲಜಿ/ಲೈಫ್ ಸೈನ್ಸ್/ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಅನುಭವ:
ಅಭ್ಯರ್ಥಿಗಳು ಕ್ಲಿನಿಕಲ್ ರಿಸರ್ಚ್ ಸೆಟ್ಟಿಂಗ್ನಲ್ಲಿ ಕನಿಷ್ಠ 1-2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಮತ್ತು [email protected] ಗೆ ಕಳುಹಿಸಬೇಕು.