ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ವಿದ್ಯಾರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನ/ಮಾಹಿತಿ ವಿಜ್ಞಾನ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್, M.E ಅಥವಾ M.Tech, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ಕಮ್ಯುನಿಕೇಷನ್ ಇಂಜಿನಿಯರಿಂಗ್/ಸಿಗ್ನಲ್ ಪ್ರೊಸೆಸಿಂಗ್/ಇಮೇಜ್ ಪ್ರೊಸೆಸಿಂಗ್/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ MS(R), M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಸುರತ್ಕಲ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡಾ. ಶ್ಯಾಮ್ ಲಾಲ್
ಪ್ರಧಾನ ತನಿಖಾಧಿಕಾರಿ ಮತ್ತು ಅಸೋಸಿಯೇಟ್ ಪ್ರೊಫೆಸರ್
ಇ&ಸಿ ಇಂಜಿನಿಯರಿಂಗ್ ವಿಭಾಗ
NITK ಸುರತ್ಕಲ್
ಮಂಗಳೂರು-575025
ಭಾರತ