Ad Widget .

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ

ಸಮಗ್ರ ನ್ಯೂಸ್ : ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ.

Ad Widget . Ad Widget .

ರಾಮಣ್ಣ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

Ad Widget . Ad Widget .

ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ಜಮೀನನ್ನು ರಾಮಣ್ಣ ತನ್ನ ಉಳಿದ ಸಹೋದರರಿಗೆ ಬಿಡದೆ ತಾನೇ ಉಳುಮೆ ಮಾಡುತ್ತಿದ್ದನು. ಇದೇ ವಿಚಾರಕ್ಕೆ ರಾಮಣ್ಣನ ಅಣ್ಣಂದಿರಾದ ಮೂಕಯ್ಯ, ಮುದಕಯ್ಯ ಹಾಗೂ ಅವರ ಮಕ್ಕಳು ಸೇರಿಕೊಂಡು ರಾಮಣ್ಣನ ಮೇಲೆ ಗಲಾಟೆ ಮಾಡಿದ್ದಾರೆ. ಬಳಿಕ ಕೊಡಲಿ ಮತ್ತು ಬೆತ್ತದಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು, ಇದರ ಪರಿಣಾಮ ತೀವ್ರ ರಕ್ತಸ್ರಾವಕ್ಕೊಳಗಾದ ರಾಮಣ್ಣ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಪ್ರಕರಣ ಮಾನ್ವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *