ಆಪರೇಷನ್ ಹಸ್ತ: ಇಂದು 30 ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಒಂದ್ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದರೆ , ಮತ್ತೊಂದ್ಕಡೆ, ಪ್ರಚಾರ, ಮಾತಿನ ಯುದ್ಧ, ಆಪರೇಷನ್ ಹಸ್ತ ಎಲ್ಲವೂ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಮೈಸೂರಿನಲ್ಲಿ ಮೊನ್ನೆಯಿಂದ ಪ್ರವಾಸ ಕೈಗೊಂಡಿದ್ದರು.

Ad Widget ... ..

ಈಗ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ​​​​​ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ, ಪುತ್ರ ಭರತ್​​​​​ ರಾಮಸ್ವಾಮಿ ಸೇರಿ 30 ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ.

Ad Widget

Leave a Comment

Your email address will not be published. Required fields are marked *