Ad Widget .

ಗ್ಯಾನವಾಪಿಯ ನೆಲಮಹಡಿಯಲ್ಲಿ ಹಿಂದುಗಳ ಪೂಜೆ/ ತಡೆ ನೀಡಲು ಸುಪ್ರೀಂ ನಿರಾಕರಣೆ

ಸಮಗ್ರ ನ್ಯೂಸ್: ಮಸೀದಿಯ ನೆಲಮಹಡಿಯಲ್ಲಿರುವ ವ್ಯಾಸ್ ಠಿಖಾನಾ ಎಂದೂ ಕರೆಯಲಾಗುವ ಜ್ಞಾನವಾಪಿ ಮಸೀದಿಯ ದಕ್ಷಿಣದ ಭಾಗದ ನೆಲಮಹಡಿಯಲ್ಲಿನ ಮೂರ್ತಿಗಳಿಗೆ ಹಿಂದುಗಳ ಪೂಜೆ ನಿಲ್ಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದರಿಂದ ಹಿಂದುಗಳ ಪೂಜೆಗೆ ಅವಕಾಶ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸಮಿತಿಗೆ ಹಿನ್ನಡೆಯಾಗಿದೆ.

Ad Widget . Ad Widget .

ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗ್ಯಾನವಾಪಿ ಮಸೀದಿ ಉಸ್ತುವಾರಿ ವಹಿಸಿರುವ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‍ನ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಹಿಂದುಗಳ ಪೂಜೆಗೆ ತಡೆ ನೀಡಲು ನಿರಾಕರಿಸಿದೆ. ಇದೇ ವೇಳೆ ಮಸೀದಿ ಆವರಣದೊಳಗೆ ಹಿಂದುಗಳ ಧಾರ್ಮಿಕ ಆಚರಣೆಗಳ ಮೇಲೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.

Ad Widget . Ad Widget .

ಮಸೀದಿಯ ನೆಲಮಹಡಿಯಲ್ಲಿರುವ ಹಿಂದು ಮೂರ್ತಿಗಳ ಪೂಜೆಗೆ ಅವಕಾಶ ನೀಡುವಂತೆ ವಾರಣಾಸಿ ಕೋಟ್ರ್ನಲ್ಲಿ ಸುದೀರ್ಘ ವಿಚಾರಣೆ ನಡೆದಿತ್ತು. ಈ ಹೋರಾಟದಲ್ಲಿ ಜನವರಿ 31ರಂದು ಮಹತ್ವದ ಗೆಲುವು ಸಿಕ್ಕಿತ್ತು. ವಾರಣಾಸಿ ಜಿಲ್ಲಾ ನ್ಯಾಯಾಲಯ ಜನವರಿ 31ಕ್ಕೆ ಹಿಂದುಗಳಿಗೆ ಪೂಜೆಗೆ ಅವಕಾಶಕ್ಕೆ ಕೋರ್ಟ್ ಸಮ್ಮತಿಸಿತ್ತು. ಇಷ್ಟೇ ಅಲ್ಲ ಒಂದು ವಾರದೊಳಗೆ ಪೂಜೆಗೆ ಅವಕಾಶ ನೀಡಬೇಕು ಎಂದು ಆದೇಶ ನೀಡಿತ್ತು. ಇದರಂತೆ ಜನವರಿ 31ರ ತಡರಾತ್ರಿಯೇ ಪೂಜೆಗೆ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಿತ್ತು.
ವಾರಾಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋಟ್ರ್ನಲ್ಲಿ ಮುಸ್ಲಿಮ್ ಸಮಿತಿ ಪ್ರಶ್ನಿಸಿತ್ತು. ಹೈಕೋರ್ಟ್ ಕೂಡ ಈ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಟ ಹಿಂದುಗಳ ಪೂಜೆಗೆ ಅಸ್ತು ಎಂದಿದೆ.

Leave a Comment

Your email address will not be published. Required fields are marked *