Ad Widget .

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ.

Ad Widget . Ad Widget .

ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು.

ಮಾ.29 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ಆತ, ಅಂದು ಮಧ್ಯಾಹ್ನ ವಿಪರೀತ ಕುಡಿದು ಮನೆಗೆ ಬಂದಿದ್ದು, ಮದ್ಯಪಾನ ಚಟದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮನೆಯವರ ಮುಂದೆಯೇ ಯಾವುದೋ ವಿಷ ಪದಾರ್ಥ ಸೇವಿಸಿದ್ದಾನೆ. ನಂತರ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ.

Leave a Comment

Your email address will not be published. Required fields are marked *