ನಾಳೆ(ಎ.03) ದ್ವಿತೀಯ ಪಿಯುಸಿ ರಿಸಲ್ಟ್! ನಕಲಿ ಸುತ್ತೋಲೆ ಕುರಿತು ಸ್ಪಷ್ಟನೆ ನೀಡಿದ ಇಲಾಖೆ

ಸಮಗ್ರ ನ್ಯೂಸ್: ನಾಳೆ(ಎ.03) ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟವಾಗಲಿದೆ ಎನ್ನುವ ಪ್ರತಿಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ ಸುತ್ತೋಲೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Ad Widget ... ..

ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ದ್ವಿತೀಯ ಪಿಯುಸಿ ರಿಸಲ್ಟ್ ಇನ್ನೂ ಹತ್ತರಿಂದ 15 ದಿವಸದಲ್ಲಿ ಬರುವ ಸಾಧ್ಯತೆ ಇದೇ ಎನ್ನಲಾಗುತ್ತಿದೆ, ಅದಾಗ್ಯೂ ಕೂಡ ಆಯುಕ್ತರೇ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ.

Ad Widget

ವೈರಲ್ ಆಗಿರುವ ನಕಲಿ ಪತ್ರಿಕಾ ಪ್ರಕಟಣೆಯಲ್ಲಿ ಈ ರೀತಿ ವಿವರಿಸಲಾಗಿದೆ. ‘ 2023- 24ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ:11/03/2014 ರಿಂದ 21/03/2024ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯವಾದನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: (M11/2121 ರಂದು ಬೆಳಿಗ್ಗೆ 11:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಟಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ DO 03/04/20248 ವೀಕ್ಷಿಸಬಹುದಾಗಿದೆ ಎಂದು ಪ್ರಕಟಿಸಲಾಗಿದ್ದು, ಈ ಸುತ್ತೋಲೆ ನಕಲಿ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *