Ad Widget .

ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ

ಸಮಗ್ರ ನ್ಯೂಸ್: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.

Ad Widget . Ad Widget .

ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Leave a Comment

Your email address will not be published. Required fields are marked *