Ad Widget .

ಚಾಮರಾಜನಗರದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್‌ ಬೋಸ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಬಾಲರಾಜ್ ಅವರು ನಾಮಪತ್ರ ಸಲ್ಲಿಸಿದರು.

Ad Widget . Ad Widget .

ಕಾಂಗ್ರೆಸ್ ನಾಯಕರಿಂದ ಭರ್ಜರಿ ರೋಡ್ ಷೋವನ್ನು ನಡೆಸಲಾಯಿತು. ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ನಗರದಲ್ಲಿ ಭರ್ಜರಿ ರೋಡ್ ಷೋ ನಡೆಸಿದರು.

Ad Widget . Ad Widget .

ನಗರದ ಭುವನೇಶ್ವರಿ ವೃತ್ತದಿಂದ ತೆರೆದ ವಾಹನ ಏರಿದ ಕಾಂಗ್ರೆಸ್ ನಾಯಕರು ಪಚ್ಚಪ್ಪ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ತನಕ ಮೆರವಣಿಗೆ ಮೂಲಕವೇ ಅಭ್ಯರ್ಥಿ ಸುನೀಲ್‌ಬೋಸ್ ಪರ ಮತಪ್ರಚಾರ ನಡೆಸಿದರು. ಬಳಿಕ ಅಭ್ಯರ್ಥಿ ಸುನೀಲ್ ಬೋಸ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಾಥ್ ನೀಡಿದರು.

Leave a Comment

Your email address will not be published. Required fields are marked *