ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗೊಂದು ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 4 ಕೋಟಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ 4 ಕೋಟಿ ಹಣ ಪಡೆದು ವಂಚನೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಿಯಾಜ್ ಅಹ್ಮದ್, ಯೂಸುಫ್, ಚಂದ್ರಪ್ಪ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಈ ಖತರ್ನಾಕ್ ಗ್ಯಾಂಗ್ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸಲು 5 ಕೋಟಿ ಆಫರ್ ನೀಡಿದ್ದು ಬಳಿಕ 4.10 ಕೋಟಿ ಹಣ ಪಡೆದಿದ್ದಾರೆ. ಆರೋಪಿಗಳ ಬಗ್ಗೆ ಅನುಮಾನ ಬಂದು ಮಹಿಳೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ನಡಾವಳಿಗಳು, ಟಿಪ್ಪಣಿಯನ್ನ ನಕಲು ಮಾಡಿದ್ದ ಆರೋಪಿಗಳು ನೇಮಕಾತಿ ಬಗ್ಗೆ ನಕಲಿ ಟಿಪ್ಪಣಿ ತಯಾರಿಸಿ, ಸಿಎಂ ಹಾಗೂ ರಾಜ್ಯಪಾಲರ ನಕಲಿ ಸಹಿ ಬಳಕೆ ಮಾಡಿ ಮಹಿಳೆಯನ್ನು ವಂಚಿಸಿದ್ದಾರೆ.

Ad Widget

Leave a Comment

Your email address will not be published. Required fields are marked *