ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಸಂದರ್ಶನ ನಡೆಯುವ ಸ್ಥಳ:
ಸಿವಿಲ್ ಎಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್
ಕರ್ನಾಟಕ