ಲೋಕಸಭಾ ಚುನಾವಣೆ/ ಚನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಬ್ಬರದ ಪ್ರಚಾರ ಆರಂಭಗೊಂಡಿದ್ದು, ಇಂದು ರಾಜ್ಯಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

Ad Widget ... ..

ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.
ಒಂದೂವರೆ ಕಿಲೋಮೀಟರ್ ಸಾಗಲಿರುವ ಈ ರೋಡ್‍ಶೋನಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಚ್. ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *