ಸಮಗ್ರ ನ್ಯೂಸ್ : ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಪ್ತ ಸಹಾಯಕರೊಬ್ಬರ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ ಎಂಬ ದೆಹಲಿ ಸಚಿವೆ ಆತಿಶಿ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸೂಕ್ತ ದಾಖಲೆ ಒದಗಿಸಿ, ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಹೇಳಿದೆ.
ಬಿಜೆಪಿ ಮುಖಂಡ ವೀರೇಂದ್ರ ಸಚ್‌ದೇವ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ. ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.
ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.