ಕೇರಳ : ಬಾವಿಗೆ ಬಿದ್ದ ಹುಲಿಯ ರಕ್ಷಣೆ

ಸಮಗ್ರ ನ್ಯೂಸ್‌ : ಜನವಸತಿ ಪ್ರದೇಶಕ್ಕೆ ಹುಲಿಯೊಂದು ನುಗ್ಗಿ ಮನೆಯೊಂದರ ಬಾವಿಗೆ ಬಿದ್ದ ಘಟನೆ ವಯನಾಡು ಜಿಲ್ಲೆಯ ಕಾಲಪೆಟ್ಟಾ ಎಂಬಲ್ಲಿ ನಡೆದಿದೆ.

Ad Widget ... ..

ಈ ವೇಳೆ ಮನೆಯವರು, ಛಾವಣಿ ಮೇಲಿನ ನೀರಿನ ಟ್ಯಾಂಕ್‌ಗೆ ನೀರು ಪೂರೈಕೆ ಆಗದಿದ್ದನ್ನು ಪರಿಶೀಲಿಸಲು ಹೋಗಿದ್ದಾಗ ಬಾವಿಯಲ್ಲಿ ಹುಲಿ ಇರುವುದನ್ನು ಕಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು.

Ad Widget

ಸುದ್ದಿ ತಿಳಿದ ಅರಣ್ಯಾಧಿಕಾರಿಗಳ ತಂಡ ಬಾವಿಯಿಂದ ನೀರನ್ನು ಹೊರ ಹಾಕಿ, ಬಳಿಕ ಅರವಳಿಕೆ ನೀಡಿ ಹುಲಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಗಂಡು ಹುಲಿಯನ್ನು ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *