ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸಮಗ್ರ ನ್ಯೂಸ್‌ : ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget . Ad Widget

ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ 1 ರಿಂದ 5 ತರಗತಿಯ 32 ಮಕ್ಕಳಲ್ಲಿ ವಾಂತಿ, ತಲೆನೋವು ಕಾಣಿಸಿಕೊಂಡಿದೆ. ಒಬ್ಬರ ನಂತರ ಒಬ್ಬರು ಅಸ್ವಸ್ಥಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಡಿಎಚ್ಓ ಡಾ. ಲಿಂಗರಾಜ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ ನಾಗರಾಜ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ಶಾಲೆಯ ಶಿಕ್ಷಕರಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ.

. Ad Widget .

Leave a Comment

Your email address will not be published. Required fields are marked *