Ad Widget .

ಹೈದರಾಬಾದ್ : ಕೆಮಿಕಲ್‌ ಫ್ಯಾಕ್ಟರಿ ಭೀಕರ ಸ್ಫೋಟಕ್ಕೆ ಐವರು ಬಲಿ

ಸಮಗ್ರ ನ್ಯೂಸ್‌ :‌ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ಚಂದಾಪುರ ಗ್ರಾಮದ ಎಸ್‌ಬಿಆರ್‌ ಆರ್ಗಾನಿಕ್ಸ್‌ ಕಾರ್ಖಾನೆಯಲ್ಲಿ ನಡೆದಿದೆ.

Ad Widget . Ad Widget .

ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿದೆ.

Ad Widget . Ad Widget .

ಭೀಕರ ಸ್ಫೋಟದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಹೊಗೆ ಆವರಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಯು ತೀವ್ರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಇನ್ನೂ 8-10 ಕಾರ್ಮಿಕರು ಕಾರ್ಖಾನೆಯಲ್ಲಿಯೇ ಸಿಲುಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇದುವರೆಗೆ ಮೃತರು ಹಾಗೂ ಗಾಯಾಳುಗಳ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *