ಬೀದರ್: ಹೊತ್ತಿ ಉರಿದ ಮೊಬೈಲ್ ಅಂಗಡಿ- 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್‌ : ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

. Ad Widget . Ad Widget . Ad Widget .

ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಅಂಗಡಿ ಬೆಂಕಿಗಾಹುತಿಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಅಂಗಡಿಯಲ್ಲಿದ್ದ 200ಕ್ಕೂ ಹೆಚ್ಚು ಮೊಬೈಲ್ ಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Leave a Comment

Your email address will not be published. Required fields are marked *