ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ.

. Ad Widget . Ad Widget . Ad Widget .

ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *