ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್:‌ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವುಗೈದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ.

. Ad Widget . Ad Widget

ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ.

. Ad Widget . . Ad Widget . Ad Widget

ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಮನೆ ಸಮೀಪವೇ ಇರುವ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ 3ರಂದು ಬೆಳಗ್ಗೆ ನೋಡಿದಾಗ ಗೋದಾಮಿನ ಬಾಗಿಲು ತುಂಡಾಗಿ ಬಿದ್ದಿರುವುದು ಕಂಡುಬಂದಿದ್ದು ಪರಿಶೀಲಿಸಿದಾಗ ಗೋದಾಮಿನ ಒಳಗಿದ್ದ 25 ಅಡಿಕೆ ಚೀಲಗಳು ಕಳವಾಗಿರುವುದು ಕಂಡುಬಂದಿದೆ. ಕಳ್ಳತನವಾಗಿರುವ ಅಡಿಕೆಯ ಒಟ್ಟು ಮೌಲ್ಯ 1,35,000 ರೂ. ಎಂದು ಅಂದಾಜಿಸಲಾಗಿದೆ.

ಪ್ರಕರಣದ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *