Ad Widget .

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಯುವ ನ್ಯಾಯ’ ಎಂಬ ಐದು ಅಂಶಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

Ad Widget . Ad Widget .

ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸುತ್ತೇವೆ. ನಾವು ಜಾತಿಗಳು, ಉಪಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಗುರುತಿಸುತ್ತೇವೆ. ಮೀಸಲಾತಿ ಮೇಲಿನ 50 ಪ್ರತಿಶತ ಮಿತಿಯನ್ನು ತೆಗೆದುಹಾಕಲಾಗುತ್ತದೆ.

Ad Widget . Ad Widget .

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುತ್ತೇವೆ. ಮಹಾಲಕ್ಷ್ಮಿ ಯೋಜನೆಯಡಿ ದೇಶದ ಬಡ ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತೇವೆ. ವಿದ್ಯಾರ್ಥಿಗಳಿಗೂ ಸಹಾಯ ಮಾಡುತ್ತೇವೆ.

ಕಿಸಾನ್ ನ್ಯಾಯ್ ಹೆಸರಿನಲ್ಲಿ ನಾವು ರೈತರನ್ನು ಬೆಂಬಲಿಸುತ್ತೇವೆ. ರೈತರ ಸಾಲ ಮನ್ನಾ. ಕನಿಷ್ಠ ಬೆಂಬಲ ಬೆಲೆ ಕಾಯಿದೆ ತರುವ ಮೂಲಕ ರೈತರ ಆದಾಯ ಹೆಚ್ಚಿಸುತ್ತೇವೆ. ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡುತ್ತೇವೆ.

ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಅಗ್ನಿವೀರ್ ಯೋಜನೆ ರದ್ದು ಮಾಡುತ್ತೇವೆ. ಯುವಕರಿಗೆ ಉದ್ಯೋಗ ನೀಡುತ್ತೇವೆ. ಸಂವಿಧಾನದ 10ನೇ ಶೆಡ್ಯೂಲ್‌ಗೆ ತಿದ್ದುಪಡಿ ತರಬೇಕು. ಪಕ್ಷ ತೊರೆದವರನ್ನು ಅನರ್ಹಗೊಳಿಸಬೇಕು.

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ರಕ್ಷಿಸುತ್ತದೆ. ನಾವು ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಪರಿಚಯಿಸುತ್ತೇವೆ. ನಾವು ಅಲ್ಪಸಂಖ್ಯಾತರಿಗೆ ಸುಲಭವಾಗಿ ಸಾಲ ನೀಡುತ್ತೇವೆ. 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು. ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನು ರೂಪಿಸಲಾಗುವುದು.

ಖಾಸಗಿತನದ ಹಕ್ಕನ್ನು ಉಲ್ಲಂಘಿಸುವ ಪ್ರತಿಯೊಂದು ಕಾನೂನನ್ನು ಕಾಂಗ್ರೆಸ್ ಪಕ್ಷ ರದ್ದುಗೊಳಿಸಲಿದೆ. ‘ಒನ್ ನೇಷನ್ ಒನ್ ಎಲೆಕ್ಷನ್’ ವಿಚಾರಕ್ಕೆ ಕಾಂಗ್ರೆಸ್ ವಿರುದ್ಧವಾಗಿದೆ. ಕಾಂಗ್ರೆಸ್ ಮಾನನಷ್ಟವನ್ನು ಅಪರಾಧ ಎಂದು ಪರಿಗಣಿಸುತ್ತದೆ. ಎಂಎನ್‌ಆರ್‌ಇಜಿಎ (ಉದ್ಯೋಗ ಖಾತರಿ) ಕನಿಷ್ಠ ಕೂಲಿಯನ್ನು ರೂ.400ಕ್ಕೆ ಹೆಚ್ಚಿಸಲಿದೆ.

Leave a Comment

Your email address will not be published. Required fields are marked *