ಸಮಗ್ರ ನ್ಯೂಸ್ : ಎಎಪಿ ಸಂಸದ ಸಂಜಯ್ ಸಿಂಗ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದರ್ ಜೈನ್ ಅವರು ಜೈಲಿನಲ್ಲಿದ್ದಾರೆ. ಏಕೆಂದರೆ ಇವರೆಲ್ಲರೂ ದೆಹಲಿಯ 2 ಕೋಟಿ ಜನರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಬಯಸಿದ್ದರು. ಆದರೆ, ಎಎಪಿ ಇದಕ್ಕೆ ಹೆದರುವುದಿಲ್ಲ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಅರವಿಂದ ಕೇಜ್ರಿವಾಲ್ ಅವರು ರಾಜೀನಾಮೆ ನೀಡುವುದಿಲ್ಲ. ದೆಹಲಿ ಜನರಿಗಾಗಿ ಅವರು ಸೇವೆ ಮಾಡುತ್ತಲೇ ಇರುತ್ತಾರೆ ಎಂದರು. ಸರ್ವಾಧಿಕಾರಿಗಳ ಬಗ್ಗೆ ದೇಶದ ಜನ ಎಚ್ಚರಿಕೆಯಿಂದಿರಬೇಕು. ಏಕೆಂದರೆ ಅವರು ಜನರ ಕಣ್ಣಲ್ಲಿ ನೀರು ತರಿಸುತ್ತಾರೆ. ಆದರೆ ಕೇಜ್ರಿವಾಲ್ ಅವರು ನಿಮ್ಮ ಮುಖದಲ್ಲಿ ನಗು ತರಿಸುತ್ತಾರೆ. ಅಲ್ಲದೇ ಜನರಿಗೆ ಉಚಿತ ಆರೋಗ್ಯ ಸೇವೆ ಮತ್ತು ಉಚಿತ ಶಿಕ್ಷಣ ಸೌಲಭ್ಯವನ್ನು ಕಲ್ಪಿಸುತ್ತಾರೆ ಎಂದರು.