Ad Widget .

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ಸಮಗ್ರ ನ್ಯೂಸ್ : ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು.

Ad Widget . Ad Widget .

ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು.

Ad Widget . Ad Widget .

40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು ನಾವು ಸ್ಮರಿಸಬೇಕು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ‌ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *