Ad Widget .

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

Ad Widget . Ad Widget .

ಅವರಿಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ ಆವರಣದಲ್ಲಿ ನಡೆಯುತ್ತಾರೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget .

ಕೇಜ್ರಿವಾಲ್ ಅವರ ತೂಕ, ಶುಗರ್‌ ಹಾಗೂ ರಕ್ತದೊತ್ತಡ ಸಂಬಂಧ ಹಿರಿಯ ವೈದ್ಯರೊಬ್ಬರು ದಿನಕ್ಕೆ ಎರಡು ಬಾರಿ ಮೇಲ್ವಿಚಾರಣೆ ಮಾಡುತ್ತಾರೆ. ದೆಹಲಿ ಮುಖ್ಯಮಂತ್ರಿ ಆರೋಗ್ಯವಾಗಿದ್ದಾರೆ. ಬಿಪಿ ಉತ್ತಮವಾಗಿದೆ, ಶುಗರ್ ನಿಯಂತ್ರಣದಲ್ಲಿದೆ ಮತ್ತು ಅವರ ತೂಕ 65 ಕೆಜಿ ಸ್ಥಿರವಾಗಿದ್ದು, ತೂಕ ಕಡಿಮೆಯಾಗಿಲ್ಲ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ.

ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ 4.5 ಕೆಜಿ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಸಚಿವ ಅತಿಶಿ ಆರೋಪಿಸಿದ್ದರು. 55ರ ಹರೆಯದ ದೆಹಲಿ ಮುಖ್ಯಮಂತ್ರಿಗೆ ತಮ್ಮ ಸೆಲ್‌ನ ಹೊರಗೆ ನಡೆಯಲು ಅವಕಾಶ ನೀಡಲಾಗಿದೆ. ಆದರೆ ಭದ್ರತಾ ಕಾರಣಗಳಿಂದಾಗಿ ಅವರು ಇತರ ಕೈದಿಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

ಏಷ್ಯಾದ ಅತಿದೊಡ್ಡ ಜೈಲಿನಲ್ಲಿ ಇರಿಸಲಾಗಿರುವ ಮೊದಲ ಹಾಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್‌ನ ಜೈಲು ಸಂಖ್ಯೆ 2 ರ ಸಾಮಾನ್ಯ ವಾರ್ಡ್ ಸಂಖ್ಯೆ 3 ರಲ್ಲಿ 14×8 ಅಡಿ ಕೊಠಡಿಯಲ್ಲಿ ಇರಿಸಲಾಗಿದೆ.

Leave a Comment

Your email address will not be published. Required fields are marked *