ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಇಂದು ವಚನ ಸ್ವೀಕರಿಸಿದರು. ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

. Ad Widget . Ad Widget

ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋನಿಯಾರಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆರ್ ಪಿಎನ್ ಸಿಂಗ್, ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಸೈಯದ್ ನಾಸೀರ್ ಹುಸೇನ್, ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಾಮಿಕ್ ಭಟ್ಟಾಚಾರ್ಯ, ವೈಎಸ್ ಆರ್‍ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ್ ಸುಬ್ಬಾ ರೆಡ್ಡಿ ಅವರಿಗೂ ಪ್ರಮಾಣ ವಚನ ಭೋದಿಸಲಾಯಿತು.

. Ad Widget . . Ad Widget . Ad Widget

Leave a Comment

Your email address will not be published. Required fields are marked *