Ad Widget .

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ನಾಗಭೂಷಣ್ (61) ಮೃತ ದುರ್ದೈವಿ. ತಮ್ಮ ಒಂದೂವರೆ ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಬೆಳೆಯಲಾಗಿತ್ತು. ತೀವ್ರ ಬರಗಾಲ ಹಿನ್ನಲೆಯಲ್ಲಿ 200 ಅಡಿ ಬೋರ್ ತೆಗೆದರೂ ನೀರು ಬಾರದ ಕಾರಣ ಮಾಡಿದ ಸಾಲವನ್ನು ತೀರಿಸಲು ಆಗದೆ ಬಾಳೆ ಬೆಳೆಗೆ ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡ ರೈತನನ್ನು ಕಳೆದ ಎಂಟು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Ad Widget . Ad Widget .

ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ರೈತ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೂಡಲೇ ಸರ್ಕಾರ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *