Ad Widget .

ನವದೆಹಲಿ : ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ; ಸಿಬಿಐ ದಾಳಿ

ಸಮಗ್ರ ನ್ಯೂಸ್‌ : ಮಕ್ಕಳ ಕಳ್ಳಸಾಗಣೆ ಪ್ರಕರಣ ಸಂಬಂಧಿಸಿದಂತೆ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಈ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.

Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಇದ್ದಾರೆ.

Ad Widget . Ad Widget .

ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ. ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ:

ಸಿಬಿಐ ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *