Ad Widget .

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ.

Ad Widget . Ad Widget .

ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ.

Ad Widget . Ad Widget .

ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ನಿಮಗೆ ಸ್ವಾಗತ. ಭಾರತ ತನ್ನ ನೆರೆ ರಾಷ್ಟ್ರಗಳಿಗೆ ಮೊದಲ ಆದ್ಯತೆ ನೀಡುತ್ತದೆ. ಸಾಗರ ನೀತಿಗಳಿಗೆ ದೃಢವಾಗಿ ಬದ್ಧವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾರತ ಮತ್ತು ಮಾಲ್ಡೀವ್ಸ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಅಡಿಯಲ್ಲಿ 2024-2025 ರ ಅವಧಿಯಲ್ಲಿ ಸರ್ಕಾರವು ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಅಕ್ಕಿ, ಗೋಧಿ, ಹಿಟ್ಟು, ಸಕ್ಕರೆ, ಧಾನ್ಯ, ನದಿ ಮರಳನ್ನು ಒಳಗೊಂಡಂತೆ ಕೆಲವು ಪ್ರಮಾಣದ ಅಗತ್ಯ ವಸ್ತುಗಳನ್ನು ಮಾಲ್ಡೀವ್ಸ್ಗೆ ರಫ್ತು ಮಾಡಲು ಒಪ್ಪಿಗೆ ನೀಡಿದೆ.

ಈ ವಸ್ತುಗಳ ರಫ್ತು 2024-25 ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ನಿರ್ಬಂಧ/ನಿಷೇಧದಿಂದ ವಿನಾಯಿತಿ ಪಡೆಯುತ್ತದೆ. ಅನುಮತಿಸಲಾದ ನಿರ್ದಿಷ್ಟ ಪ್ರಮಾಣದಲ್ಲಿ ಭಾರತ ಆಲೂಗಡ್ಡೆ (21,513.08 ಟನ್), ಈರುಳ್ಳಿ (35,749.13 ಟನ್), ಅಕ್ಕಿ (1,24,218.36 ಟನ್), ಗೋಧಿ ಹಿಟ್ಟು (1,09,162.96 ಟನ್), ಸಕ್ಕರೆ (64,494.33 ಟನ್), ನದಿ ಮರಳು (ಒಂದು ಮಿಲಿಯನ್ ಟನ್) ರಫ್ತು ಮಾಡಲಿದೆ.
1981ರಲ್ಲಿ ಭಾರತ ಮತ್ತು ಮಾಲ್ಡೀವ್ಸ್ ಮಧ್ಯೆ ವ್ಯಾಪಾರ ಒಪ್ಪಂದ ನಡೆದಿದೆ. ಭಾರತವು 2022 ರಲ್ಲಿ ಮಾಲ್ಡೀವ್ಸ್ನ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಹೊರಹೊಮ್ಮಿದರೆ 2023 ರಲ್ಲಿ ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

ಮಾಲ್ಡೀವ್ಸ್ನಿಂದ ಭಾರತ ಸ್ಕ್ರ್ಯಾಪ್ ಲೋಹಗಳು ಆಮದು ಮಾಡುತ್ತದೆ. ಆದರೆ ಮಾಲ್ಡೀವ್ಸ್ಗೆ ಭಾರತ ವಿವಿಧ ಎಂಜಿನಿಯರಿಂಗ್ ಮತ್ತು ಕೈಗಾರಿಕಾ ಉತ್ಪನ್ನಗಳು, ಔಷಧಗಳು, ರಾಡಾರ್ ಉಪಕರಣಗಳು, ಸಿಮೆಂಟ್, ಕೃಷಿ ಉತ್ಪನ್ನಗಳಾದ ಅಕ್ಕಿ, ಸಾಂಬಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಕೋಳಿ ಉತ್ಪನ್ನಗಳನ್ನು ರಫ್ತು ಮಾಡುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *