ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ಸಮಗ್ರ ನ್ಯೂಸ್‌ : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

Ad Widget ... ..

ಸೋನಾರವಾಡದ ಅರುಣ್ ವರ್ಣೇಕರ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಈತ ಬೆರಳು ತುಂಡು ಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾನೆ.

Ad Widget

ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯ ಬಾರಿ ಆದ್ದರಿಂದ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಅರುಣ್ ಕಾಳಿಗೆ ನೀಡಿದ್ದಾರೆ.

Leave a Comment

Your email address will not be published. Required fields are marked *