Ad Widget .

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಉಡುಪಿ ಕುಂದಾಪುರ ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಕೋಣಿ ಗ್ರಾಮದ ವಿಜಯ (34) ಬಂಧಿತ ಆರೋಪಿ. ಈತನಿಂದ ಒಟ್ಟು 2.64ಲಕ್ಷ ರೂ. ಮೌಲ್ಯದ 44 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget . Ad Widget .

ಮನೆಯ ಕಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Comment

Your email address will not be published. Required fields are marked *