Ad Widget .

ಹೊಸ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ| ಮೇ.29ರಿಂದ ಶಾಲಾರಂಭ| ದಸರಾ ರಜೆ ಎಷ್ಟು ದಿನ ಗೊತ್ತೇ?

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025 ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯು 2024ರ ಮೇ 29 ರಿಂದ ಅಕ್ಟೋಬರ್ 2 ರವರೆಗೆ, ಎರಡನೇ ಅವಧಿಯು ಅಕ್ಟೋಬರ್‌ 21ರಿಂದ 2025ರ ಏಪ್ರಿಲ್‌ 10 ರವರೆಗೆ ಇರಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏಪ್ರಿಲ್ 11 ರಿಂದ ಮೇ 28ರವರೆಗೆ ಬೇಸಿಗೆ ರಜೆ ನಿಗದಿ ಮಾಡಿದೆ. 244 ಶಾಲಾ ಕರ್ತವ್ಯದ ದಿನಗಳು ಇರಲಿದ್ದು, ಇದರಲ್ಲಿ ಪರೀಕ್ಷೆ ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆಗೆ 24 ದಿನಗಳು, ಮೌಲ್ಯಮಾಪನ, ಫಲಿತಾಂಶ ವಿಶ್ಲೇಷಣೆಗೆ 10 ದಿನ, ಶಾಲಾ ಸ್ಥಳೀಯ ರಜೆ 4 ದಿನ, ಬೋಧನಾ ಕಲಿಕೆಗೆ 180 ದಿನಗಳು ಎಂದು ವಿಂಗಡಿಸಲಾಗಿದೆ.

Ad Widget . Ad Widget . Ad Widget .

ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆ, ಸಂಭ್ರಮ ಶನಿವಾರ ಸೇರಿ ಇತರ ಯೋಜನೆಗಳನ್ನು ನಿರ್ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ.

ಏಪ್ರಿಲ್ 10ಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲು 1 ರಿಂದ 9ನೇ ತರಗತಿವರೆಗೆ ಮುಕ್ತಾಯವಾಗಲಿದೆ. ಏಪ್ರಿಲ್ 11ರಿಂದ ಮೇ 28ರ ತನಕ ಬೇಸಿಗೆ ರಜೆ ಇರಲಿದೆ. ಈ ನಡುವೆ, ಪೂರ್ಣಗೊಂಡ ಮೌಲ್ಯಾಂಕನ ಪರೀಕ್ಷೆಗಳ ಮೌಲ್ಯಮಾಪನ ಫಲಿತಾಂಶವನ್ನು ಶೇ 100 ಅಂಕಗಳಿಗೆ ಕ್ರೋಢೀಕರಿಸಿ, ನಿಯಮಾನುಸಾರ ಗ್ರೇಡ್ ದಾಖಲಿಸಿ SATS ನಲ್ಲಿ ಏಪ್ರಿಲ್ 25ರೊಳಗೆ ಅಪ್ಡೇಟ್ ಮಾಡಲಾಗುತ್ತದೆ.

Leave a Comment

Your email address will not be published. Required fields are marked *