Ad Widget .

ಉಡುಪಿ : ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆ‌ರ್.ಮೆಂಡನ್ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

Ad Widget . Ad Widget .

ಕಟಪಾಡಿ ತ್ರಿಶಾ ಕಾಲೇಜಿನ ಕಾಂಪೌಂಡಿನ ಒಳಗಡೆ ಕೋಟ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆ‌ರ್.ಮೆಂಡನ್ ಅವರಿಗೆ ತ್ರಿಶಾ ಕಾಲೇಜಿನ ಆಡಳಿತ ಮಂಡಳಿಯವರು ಮಾತನಾಡಲು ಹ್ಯಾಂಡ್ ಮೈಕ್ ನೀಡಿದ್ದು, ಅಲ್ಲದೇ ಕಾಲೇಜಿನ ಒಳಭಾಗದಲ್ಲಿ ಮತ್ತು ಕಾಲೇಜಿನ 2 ಮಹಡಿಯ ಕಾರಿಡರ್‌ನಲ್ಲಿ ವಿದ್ಯಾರ್ಥಿಗಳಿಗೆ ನಿಲ್ಲಲು ಅನುವು ಮಾಡಿಕೊಡಲಾಗಿತ್ತು.

Ad Widget . Ad Widget .

ಇದನ್ನು ಬಳಸಿಕೊಂಡ ಕೋಟ ಶ್ರೀನಿವಾಸ ಪೂಜಾರಿ ಮೈಕ್ ಹಿಡಿದು ಕೊಂಡು ಪ್ರಚಾರ ಕಾರ್ಯ ನಡೆಸುವ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಿರುವುದಾಗಿ ಕಾಪು ಕ್ಷೇತ್ರ ಫೈಯಿಂಗ್ ಸ್ಕಾಡ್‌ನ ವಿಶ್ವನಾಥ್ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *