Ad Widget .

ಖಾಸಗಿ ಬಸ್​​​ ಪಲ್ಟಿ|ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್​​​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

Ad Widget . Ad Widget .

ಬಸ್‌ನಲ್ಲಿದ್ದಂತಹ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget . Ad Widget .

ಈ ಖಾಸಗಿ ಬಸ್ ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿತ್ತು. 50 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *