Ad Widget .

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

Ad Widget . Ad Widget .

ಏ.14ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ.

Ad Widget . Ad Widget .

ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ರೋಡ್‌ ಶೋ ನಡೆಸುವ ಸಾಧ್ಯತೆ ಇದೆ. ನಮೋ ರೋಡ್‌ ಶೋ ಮಾರ್ಗ ನಕ್ಷೆಯು ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *