Ad Widget .

ಕೇಜ್ರೀವಾಲ್ ಬಂಧನ/ ಆಮ್ ಆದ್ಮಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಸಮಗ್ರ ನ್ಯೂಸ್: ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಜಂತರ್ ಮಂತರ್‍ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

Ad Widget . Ad Widget .

ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ, ಆಮ್ ಆದ್ಮ ಪಕ್ಷದ ಶಾಸಕರು, ಸಚಿವರು, ಸಂಸದರು ಮತ್ತು ಕೌನ್ಸಿಲರ್‍ಗಳು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‍ನ ಶಾಹೀದ್ ಭಗತ್ ಸಿಂಗ್ ಅವರ ಹಳ್ಳಿಯಾದ ಖತ್ಸರ್ಕಲನ್ನಲ್ಲಿ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಸಾಮೂಹಿಕ ಉಪವಾಸವನ್ನು ನಡೆಸಲಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ದೇಶದ 25 ರಾಜ್ಯಗಳ ರಾಜಧಾನಿಗಳು, ಜಿಲ್ಲೆ/ಬ್ಲಾಕ್ ಕೇಂದ್ರಗಳು, ಹಳ್ಳಿಗಳು ಮತ್ತು ನಗರಗಳಲ್ಲಿ ಜನರು ಸಾಮೂಹಿಕ ಉಪವಾಸ ಮಾಡಲಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *