Ad Widget .

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

Ad Widget . Ad Widget . Ad Widget . Ad Widget .

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

Ad Widget . Ad Widget .

ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯಿಂದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದೆ. ಅನಂತರ ಮೂರು ದಿನಗಳ ಕಾಲ ಅಂದರೆ ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.

Leave a Comment

Your email address will not be published. Required fields are marked *