ಮಡಿಕೇರಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌

ಸಮಗ್ರ ನ್ಯೂಸ್‌ : ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

Ad Widget ... ..

ಅವರು ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂದಿನ ಕಾಲದಲ್ಲಿ ಅರಸರು ಪ್ರತಿ ಮನೆಗೂ ತೆರಳಿ ತಂದೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಮತಗಳ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

Ad Widget

Leave a Comment

Your email address will not be published. Required fields are marked *