ನಂಜನಗೂಡು: ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ರೂ. ಹಣ ಸೀಜ್

ಸಮಗ್ರ ನ್ಯೂಸ್‌ : ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget ... ..

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿ ಒಬ್ಬ ಕಾರಿನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಸುಮಾರು ಒಂದು ಲಕ್ಷ ರು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು.ಈ ವೇಳೆ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡುವ ವೇಳೆ ಹಣ ಸಿಕ್ಕಿಬಿದ್ದಿದೆ.

Ad Widget

ಈಗಾಗಲೇ ಹಣವನ್ನು ಜಪ್ತಿ ಮಾಡಿ, ವಶಕ್ಕೆ ಪಡೆದುಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿಗಳಾದ ಚಿನ್ನಸ್ವಾಮಿ, ರಂಗಸ್ವಾಮಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಪ್ರಕಾಶ್ ರಾಜ್ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *