ಸಮಗ್ರ ನ್ಯೂಸ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು 2024ರ ಜನವರಿಯಿಂದಲೇ ಪರಿಷ್ಕರಣೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚಿಸಿದೆ.
2023-24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಾಭಾರಕ್ಕೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಈಗಾಗಲೇ ಫೆಬ್ರವರಿವರೆಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಆದರೆ ಅತಿಥಿ ಉಪನ್ಯಾಸಕರು ಸಲ್ಲಿಸಿರುವ ಸೇವಾವಧಿಯ ಆಧಾರದಲ್ಲಿ ಗೌರವಧವನ್ನು ಪರಿಷ್ಕರಣೆ ಮಾಡಬೇಕಿದೆ.
ಈ ಹಿನ್ನೆಲೆಯಲ್ಲಿ 2024ರ ಜನವರಿಯಿಂದಲೇ ವ್ಯತ್ಯಾಸವಾಗಿರುವ ಗೌರವಧನವನ್ನು ಸರಿಪಡಿಸಬೇಕಿರುವ ಕಾರಣ ಅತಿಥಿ ಶಿಕ್ಷಕರ ಮಾಹಿತಿಯನ್ನು ಗೂಗಲ್ ಫಾರಂನಲ್ಲಿ ಅಪ್‌ಲೋಡ್ ಮಾಡಬೇಕು ಮತ್ತು ಇ-ಮೇಲ್ [email protected] ಗೆ ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.