Ad Widget .

ರಾಮನಗರ: ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು

ಸಮಗ್ರ ನ್ಯೂಸ್‌ : ಬಿಸಿಲಿನ ಬೇಗೆ ತಾಳಲಾರದೆ ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.

Ad Widget . Ad Widget .

ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ ಇದೀಗ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ. ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Ad Widget . Ad Widget .

ಸ್ಥಳಕ್ಕೆ ಡಿಎಫ್‌ಓ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.

Leave a Comment

Your email address will not be published. Required fields are marked *