ತಮಿಳುನಾಡಿನಲ್ಲಿ ಜೆ ಪಿ‌ ನಡ್ಡಾ ರೋಡ್ ಶೋಗೆ ಅನುಮತಿ ನಿರಾಕರಣೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನ ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿದೆ.

Ad Widget ... ..

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ . ಇದರ ಜೊತೆಗೆ ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ ಮತ್ತು ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದಾರೆ.

Ad Widget

ಇನ್ನುತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ಪಡೆಯುವುದಾಗಿ ಜೆಪಿ ನಡ್ಡಾ ಹೇಳಿದ್ದಾರೆ.

Leave a Comment

Your email address will not be published. Required fields are marked *