Ad Widget .

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಕೆಲ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

Ad Widget . Ad Widget .

ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದು ದೃಢಪಟ್ಟಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Ad Widget . Ad Widget .

ತಪ್ಪಾಗಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರ ಬದಲಾವಣೆಗೆ ಅವರು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮುಖಾಂತರ ಸಕಾರಣವನ್ನು ನೀಡಿ ಮನವಿ ಸಲ್ಲಿಸಬೇಕು. ಬಳಿಕ ಕಾಲೇಜಿನ ಪ್ರಾಂಶುಪಾಲರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಏ.12ರಂದು ಸಂಜೆ 5ಗಂಟೆ ಒಳಗೆ ಸಲ್ಲಿಸಬೇಕು. ಜೇವರ್ಗಿ, ಬೀದರ್, ಯಾದಗಿರಿಯಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದ್ದಲ್ಲಿ. ಅಂತಹ ಅಭ್ಯರ್ಥಿಗಳು ಮನವಿ ಸಲ್ಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Comment

Your email address will not be published. Required fields are marked *