Ad Widget .

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ

ಸಮಗ್ರ ನ್ಯೂಸ್‌ : ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಮಕ್ಕಳು ನಟಿಸಬೇಕಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ಇಲ್ಲವೇ ನಿರ್ಮಾಪಕರು, ಆಯೋಜಕರು ಮೊದಲು ಜಿಲ್ಲಾಧಿಕಾರಿ ಅವರಿಂದ ಕಡ್ಡಾಯವಾಗಿ ಅನುಮತಿ ಪತ್ರ ಪಡೆಯಬೇಕು’ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

Ad Widget . Ad Widget .

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಕಾರ್ಮಿಕ ಇಲಾಖೆಯು ಈ ಆದೇಶ ಹೊರಡಿಸಿದೆ. ಸಿನಿಮಾ, ಧಾರವಾಹಿಗಳಲ್ಲಿ ಅಭಿನಯಿಸಬೇಕಾದರೆ ಮೊದಲು ಅವರು ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಧಾರವಾಹಿ ಇಲ್ಲವೇ ಸಿನಿಮಾಗಳಲ್ಲಿ ಮಕ್ಕಳಿಗೆ ಪಾತ್ರ ನೀಡುವ ಸಿನಿಮಾ- ಸೀರಿಯಲ್ ತಂಡಗಳು ಅವರನ್ನು ದಿನದಲ್ಲಿ ಐದು ಗಂಟೆ ಮಾತ್ರವೇ ನಟನೆಗೆ ಬಳಸಿಕೊಳ್ಳಬೇಕು. ಈ ರೀತಿ ಅವರನ್ನು ತಿಂಗಳಲ್ಲಿ 27 ದಿನ ಮಾತ್ರ ಬಳಸಿಕೊಳ್ಳಬೇಕು ಎಂದು ಸರ್ಕಾರ ಷರತ್ತು ವಿಧಿಸಿದೆ. ಜೊತೆಗೆ ಈ ನಿಯಮ ಉಲ್ಲಂಘಿಸಿದಂತೆ ಎಚ್ಚರಿಕೆಯನ್ನೂ ನೀಡಿದೆ.

‘ಮುಂದಿನ ದಿನಗಳಲ್ಲಿ ಮಕ್ಕಳನ್ನು ಚಿತ್ರಕಥೆಗೆ ಅನುಗುಣವಾಗಿ ಜಿಲ್ಲಾಧಿಕಾರಿ ಅನುಮತಿ ಇಲ್ಲದೇ ಬಳಸಿಕೊಳ್ಳವುದು ಕಾನೂನು ಉಲ್ಲಂಘನೆಯಾಗಲಿದ್ದು, ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಲಾಗುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *