ಸಮಗ್ರ ನ್ಯೂಸ್: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.
ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ.