ಸಮಗ್ರ ನ್ಯೂಸ್ : ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟಾ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗೆ ಫೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್‌ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.