ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ?

ಸಮಗ್ರ ನ್ಯೂಸ್: ಮಂಡ್ಯ ಅಖಾಡದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಗೆಲುವಿಗೆ ತಂತ್ರ ರೂಪಿಸುತ್ತಿರುವ, ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಲು ಒಪ್ಪಿಗೆ ಸೂಚಿಸಿದ್ದಾರೆ.

Ad Widget ... ..

ರಮ್ಯ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ.

Ad Widget

ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ. ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ ಹೆಣೆದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.

ಮತ್ತೊಂದೆಡೆ ಮೈತ್ರಿ ಬಲ ಹೆಚ್ಚಿಸಿರುವ ಸಂಸದೆ ಸುಮಲತಾ, ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ನಾಯಕರೊಂದಿಗೆ ಪ್ರಚಾರ ನಡೆಸಲು ಮಾತುಕತೆ ನಡೆದಿದ್ದು, ಈ ಮೂಲಕ ಸುಮಲತಾ ಬೆಂಬಲಿಗರು ಹಾಗೂ ಮಹಿಳಾ ಮತದಾರರನ್ನು ಸೆಳೆಯಲು ದೋಸ್ತಿ ನಾಯಕರ ಪ್ಲಾನ್ ಮಾಡಿಕೊಂಡಿದ್ದಾರೆ.

Leave a Comment

Your email address will not be published. Required fields are marked *