ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ, ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಕೇಂದ್ರೀಯ ಮೀಸಲು ಪೆÇಲೀಸ್ ಪಡೆಗೆ ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ ತುಕಡಿಯನ್ನು ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಭದ್ರತೆಗೆ ನಿಯೋಜಿಸುವಂತೆ ಆದೇಶ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.