ಸಮಗ್ರ ನ್ಯೂಸ್ : ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕೊಡಗು ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಯಿತು.
ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸ್ಸೂರು, ಹಂಡ್ಲಿ ಮತ್ತು ಶನಿವಾರಸಂತೆಯಲ್ಲಿ ಮತಯಾಚನೆ ಮಾಡಿದರು. ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕೆಪಿಸಿಸಿ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
ಹಂಡ್ಲಿ ಸರ್ಕಲ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಂ.ಲಕ್ಷ್ಮಣ್ ಗೌಡ ಅವರು, ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಕಾಂಗ್ರೆಸ್ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ 25ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಲ್ಲಿ ತಿಂಗಳಿಗೆ 15 ದಿನ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಿ, ನಿಮ್ಮ ಸೇವಕನಾಗಿ ಕಾರ್ಯನಿರ್ವಹಿಸುದಾಗಿ ಎಂ.ಲಕ್ಷ್ಮಣ್ ಗೌಡ ಅವರು ಭರವಸೆ ನೀಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ, ಸೋಮವಾರಪೇಟೆಯಲ್ಲಿ ನನೆಗುದಿಗೆ ಬಿದ್ದಿದ್ದ ಹಾಕಿ ಟರ್ಫ್ ಗ್ರೌಂಡ್ ಪೂರ್ಣಗೊಳಿಸಲು ನಾನೇ ಬರಬೇಕಾಯಿತು. ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಎಂಆರೈ ಸ್ಕಾö್ಯನಿಂಗ್ ಯೂನಿಟ್ ಅನ್ನು ತರಲು ನಾನೇ ಬರಬೇಕಾಯಿತು. ಇದೆಲ್ಲವನ್ನು ಕ್ಷೇತ್ರದಲ್ಲಿ ಸಚಿವರಾಗಿ, ಶಾಸಕರಾಗಿದ್ದವರು ಯಾಕೆ ಮಾಡಲಿಲ್ಲವೆಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಿ ಪಿ ರಮೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಬಿ ಸತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಡಿಸಿಸಿ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ನಾಮ ನಿರ್ದೇಶಿತ ಸದಸ್ಯರುಗಳು ವಲಯ ಅಧ್ಯಕ್ಷರು ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.