ಈದ್ ಉಲ್ ಫಿತರ್ ಹಿನ್ನಲೆ| ದ.ಕ ಜಿಲ್ಲೆಯಲ್ಲಿ ಎ.10ಕ್ಕೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಈದುಲ್ ಫಿತ್‌ರ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಏ.10) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Ad Widget ... ..

ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು. ಏ. 9 ರಂದು ಚಂದ್ರ ದರ್ಶನವಾಗಿರುವುದರಿಂದ ಎ.11ರ ಬದಲಾಗಿ ದಿನಾಂಕ: ಏ.10 ಬುಧವಾರರಂದು ರಜೆ ಘೋಷಿಸಲು ಇರುವ ಸಾರ್ವಜನಿಕ ಬೇಡಿಕೆಯ ಹಿನ್ನಲೆಯಲ್ಲಿ ರಜೆಯನ್ನು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಏ.10 ಬುಧವಾರ ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.

Ad Widget

ಏ. ರಂದು ಪೂರ್ವ ನಿಯೋಜಿತಗೊಂಡಿರುವ ಶಾಲಾ ಕಾಲೇಜುಗಳ ಪರೀಕ್ಷೆಗಳಿಗೆ ರಜೆ ಅನ್ವಯಿಸುವುದಿಲ್ಲ. ಏ.11 ಗುರುವಾರ ರಂದು ಕರ್ತವ್ಯದ ದಿನವೆಂದು ಪರಿಗಣಿಸಲು ಸೂಚಿಸಿದೆ.

Leave a Comment

Your email address will not be published. Required fields are marked *