ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ.
ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.
ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಎಫ್ಐಆರ್ ಪ್ರತಿಯನ್ನು ಪ್ರಕಟಿಸಿದ್ದಾರೆ.