ಸಮಗ್ರ ನ್ಯೂಸ್ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.
ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲಾಗುತ್ತಿದೆ. ಸಿಬಿಐ ಈಗಾಗಲೇ ನನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದೆ’ ಎಂದು ಹೇಳಿದ್ದಾರೆ.
ಕವಿತಾ ಅವರು ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಅಬಕಾರಿ ನೀತಿಯ ಅನುಕೂಲ ಪಡೆದುಕೊಳ್ಳಲು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ₹100 ಕೋಟಿ ನೀಡಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಕವಿತಾ ಅವರನ್ನು 2024, ಮಾರ್ಚ್ 15ರಂದು ಬಂಧಿಸಲಾಗಿತ್ತು.